ಬೆಂಗಳೂರು: ಪಕ್ಷದ ಶಾಸಕರದಲ್ಲಿ ಅಸಮಾಧಾನ ಇರುವುದು ನಿಜ, ನನ್ನ ಬಳಿಯೂ ಕೆಲ ಶಾಸಕರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಸರ್ಕಾರ ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಿಲ್ಲ, ಕೆಲ ಇಲಾಖೆಗಳು ಮಾತ್ರ ಕೆಲಸ ಮಾಡುತ್ತಿದ್ದು. ಪೂರ್ಣ ಪ್ರಮಾಣದಲ್ಲಿ ಟೇಕಾಫ್ ಆಗಲು ಮತ್ತಷ್ಟು ಸಮಯ ಬೇಕಿದೆ. ಹಾಗೆಯೇ ಅಧಿವೇಶನದ ಒಳಗೆ ಸಂಪುಟ ವಿಸ್ತರಣೆ ಆಗುವುದು ಅನುಮಾನ. ಎಲ್ಲಾ ಸರ್ಕಾರದ ವೇಳೆಯಲ್ಲೂ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸುವುದು ಸಾಮಾನ್ಯ. ಸಿದ್ದರಾಮಯ್ಯ ಅವರು ಕೂಡ ಸಿಎಂ ಆಗಿದ್ದಾಗ ಈ ಸಮಸ್ಯೆ ಇತ್ತು. ಆದರೆ ಏನೇ ಸಮಸ್ಯೆಗಳಿದ್ದರೂ ಪಕ್ಷದ ಆಂತರಿಕ ಸಭೆಯಲ್ಲಿ ಬಗೆಹರಿಸಿಕೊಳ್ಳುವುದಾಗಿ ತಿಳಿಸಿದರು.ಸಮ್ಮಿಶ್ರ ಸರ್ಕಾರ ಕೈಗೊಂಡ ಸಾಲಮನ್ನಾದಿಂದ ಇತರೇ ಅಭಿವೃದ್ಧಿ ಕಾರ್ಯಗಳಿಗೆ ಹಣ ಹೊಂದಿಸುವುದು ಕಷ್ಟವಾಗಿದೆ. ಆದ್ದರಿಂದ ಇಂತಹ ಕಾರ್ಯಗಳಿಗೆ ಹಣ ಸರಿಯಾಗಿ ಒದಗಿಸುತ್ತಿಲ್ಲ. ಬಿಜೆಪಿಯವರು ಪಕ್ಷ ಏನೇ ಹೇಳಬಹುದು. ಶಾಸಕರು ಕೂಡ ಬೇಸರ ವ್ಯಕ್ತಪಡಿಸಿರಬಹುದು. ಆದರೆ ನಾವು ಯಾವುದೇ ರೀತಿಯಲ್ಲಿ ಶಾಸಕರ ಸಂಪರ್ಕದಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.ಡಿಕೆಶಿ ಬಳ್ಳಾರಿ ಭೇಟಿ: ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಭೇಟಿ ನೀಡಿದ್ದಾರೆ. ಅಲ್ಲದೇ ಸಿಎಂ ಕುಮಾರಸ್ವಾಮಿ ಅವರು ಸರ್ಕಾರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದ್ದಾರೆ. ಇದರ ಅನ್ವಯ ಜಿಲ್ಲೆಯಲ್ಲಿ ಬೆಳೆಗಾರರು ಹೋರಾಟ ನಡೆಸುತ್ತಿರುವ ಕಾರಣ ಅವರ ಮನವೊಲಿಸಲು ಭೇಟಿ ನೀಡಿರಬಹುದು ಅಷ್ಟೇ. ಡಿಕೆ ಶಿವಕುಮಾರ್ ನಾನು ಕಳೆದ 20 ವರ್ಷದಿಂದ ಬಹಳ ಆತ್ಮೀಯ ಸ್ನೇಹಿತರು. ಜಿಲ್ಲೆಗೆ ಬೇಕಾದ ಪ್ರಮುಖ ಕೆಲಸಗಳನ್ನು ಅವರು ಮಾಡಿದ್ದಾರೆ ಎಂದರು. ಇದನ್ನು ಓದಿ: ಬಳ್ಳಾರಿ ಆಯ್ತು ಈಗ ಜಾರಕಿಹೊಳಿ ಕೋಟೆಯಲ್ಲಿ ಹವಾ – ರೈತರ ಜೊತೆ ಡಿಕೆಶಿ ಸಂಧಾನ ಯಶಸ್ವಿಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಮಾತನಾಡಿದ್ದು, ಕೆಲ ಮೀಸಲಾತಿ ವಿಚಾರವಾಗಿ ಹಾಗೂ ವರ್ಗಾವಣೆ ಕುರಿತು ಮಾತನಾಡಬೇಕಿತ್ತು ಅಷ್ಟೇ. ಕ್ಷೇತ್ರಕ್ಕೆ ಸಿದ್ದರಾಮಯ್ಯ ಆಳ್ವಿಕೆಯಲ್ಲಿ ಸಾಕಷ್ಟು ಅನುದಾನ ಬರುತ್ತಿತ್ತು. ಆದ್ರೆ ಈಗ ಅನುದಾನ ಕಡಿಮೆ ಆಗಿದೆ. ಮೈತ್ರಿ ಸರ್ಕಾರದಲ್ಲಿ ಸಮರ್ಪಕ ಅನುದಾನ ಶಾಸಕರ ಕ್ಷೇತ್ರಗಳಿಗೆ ಬರುತ್ತಿಲ್ಲ. ಮುಂದಿನ ವರ್ಷದಲ್ಲಿ ಈ ಹಣ ಹೆಚ್ಚಳ ಆಗುವ ನಿರೀಕ್ಷೆ ಇದೆ. ಆದ್ದರಿಂದ ತಾಳ್ಮೆ ವಹಿಸಿ ಕೆಲಸ ಮಾಡುತ್ತಿದ್ದೇವೆ ಎಂದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


