ಮಂಡ್ಯ: ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಕಬ್ಬು ಅನ್‍ಲೋಡ್ ಮಾಡುತ್ತಿದ್ದಾಗ ಹಾವು ಕಚ್ಚಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.ಬೊಮ್ಮಯ್ಯ (48) ಹಾವು ಕಚ್ಚಿ ಮೃತಪಟ್ಟ ವ್ಯಕ್ತಿ. ಬೊಮ್ಮಯ್ಯ ಕೂಲಿಗೆಂದು ಎತ್ತಿನ ಗಾಡಿಯಲ್ಲಿ ಬೇರೆ ರೈತರ ಕಬ್ಬನ್ನು ಮೈಷುಗರ್ ಕಾರ್ಖಾನೆಗೆ ತಂದಿದ್ದರು. ಇಂದು ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಕ್ರೇನ್ ಸಹಾಯದಿಂದ ಕಬ್ಬನ್ನು ಕಾರ್ಖಾನೆಗೆ ಅನ್‍ಲೋಡ್ ಮಾಡುತ್ತಿದ್ದ ವೇಳೆ ಮಂಡಲದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.ಒಂದು ಕಡೆ ಕಾರ್ಖಾನೆಗೆ ಕಬ್ಬು ಪೂರೈಸಿದರೂ ಸಕಾಲಕ್ಕೆ ಹಣ ಸಿಗದೇ ರೈತರು ಪರಡಾಡುತ್ತಿದ್ದಾರೆ. ಮತ್ತೊಂದು ಕಡೆ ಸಕ್ಕರೆ ಕಾರ್ಖಾನೆಯಲ್ಲಿ ರಾತ್ರಿಯೆಲ್ಲಾ ಕೆಲಸ ಮಾಡುವ ಕೂಲಿ ಕಾರ್ಮಿಕರು ಹಾವಿನಂತ ವಿಷ ಜಂತುವಿಗೆ ಬಲಿಯಾಗುತ್ತಿದ್ದಾರೆ. ಮೃತ ಕಾರ್ಮಿಕನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಸಕ್ಕರೆ ಕಾರ್ಖಾನೆಯಿಂದ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಮಂಡ್ಯ ಸೆಂಟ್ರಲ್ ಪೊಲೀಸ್  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


