ಮಂಡ್ಯ: ಕ್ಷುಲ್ಲಕ ವಿಚಾರಕ್ಕೆ ಕುಡಿದ ಮತ್ತಿನಲ್ಲಿ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.ಶಶಿಕುಮಾರ್ ತನ್ನ ತಮ್ಮ ರವಿಕುಮಾರ್ ನಿಂದಲೇ ಕೊಲೆಯಾದ ದುರ್ದೈವಿ. ಮೂಲತಃ ಕೆಸ್ತೂರು ಗ್ರಾಮದವರಾಗಿದ್ದ ಶಶಿಕುಮಾರ್ ಬಿಎಂಟಿಸಿಯಲ್ಲಿ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದರೇ, ತಮ್ಮ ರವಿಕುಮಾರ್ ಅರಣ್ಯ ಇಲಾಖೆಯಲ್ಲಿ ಪಿಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬುಧವಾರ ರಾತ್ರಿ ಕ್ಷುಲ್ಲಕ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಜಗಳ ಏರ್ಪಟ್ಟಿತ್ತು. ಈ ವೇಳೆ ಸಿಟ್ಟಿಗೆದ್ದ ರವಿಕುಮಾರ್ ಚಾಕುವಿನಿಂದ್ ಶಶಿಕುಮಾರ್ ಗೆ ಇರಿದು ಗಾಯಗೊಳಿಸಿದ್ದನು.ಕೂಡಲೇ ಕುಟುಂಬಸ್ಥರು ಶಶಿಕುಮಾರ್ ನನ್ನು ಮಂಡ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಶಶಿಕುಮಾರ್ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿದ ಪೊಲೀಸರು, ಆರೋಪಿ ರವಿಕುಮಾರ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ. ಶಶಿಕುಮಾರ್ ಸಾಯುವ ಮುನ್ನ ನನ್ನ ಮೇಲೆ ಹಲ್ಲೆ ಮಾಡಿದ್ದಾನೆಂದು ಪೊಲೀಸರ ಬಳಿ ರವಿ ಹೇಳಿದ್ದಾನೆ.ಘಟನೆ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


