ಮಂಡ್ಯ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ (HD Kumaraswamy) ಅವರು ಇಂದು ಬೆಳಗ್ಗೆ ನಾಗಮಂಗಲಕ್ಕೆ (Nagamangala) ಭೇಟಿ ನೀಡಿದರು.ಗಲಭೆಯಿಂದ (Nagamangala Violence) ಹಾನಿಗೊಳಗಾದ ಅಂಗಡಿಗಳಿಗೆ ಭೇಟಿ ನೀಡಿದ ಹೆಚ್‌ಡಿಕೆ ಅಂಗಡಿ ಮಾಲೀಕರ ಅಳಲು ಆಲಿಸಿದರು. ಭೇಟಿ ವೇಳೆ ಹೆಚ್‌ಡಿಕೆಗೆ ಮಾಜಿ ಶಾಸಕರಾದ ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ ಸಾಥ್ ನೀಡಿದರು.ಘಟನೆ ನಡೆದ ಬುಧವಾರ ರಾತ್ರಿಯೇ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವೇ ನಾಗಮಂಗಲ ಗಲಭೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.  ಇದನ್ನೂ ಓದಿ: ನಾಗಮಂಗಲ ಗಲಭೆಗೆ ತಲೆದಂಡ – ಟೌನ್‌ ಇನ್ಸ್‌ಪೆಕ್ಟರ್‌ ಅಮಾನತು ಹೆಚ್‌ಡಿಕೆ ಹೇಳಿದ್ದೇನು?
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ.ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ. ಇದನ್ನೂ ಓದಿ: ನಾಗಮಂಗಲ ಗಲಭೆ| ಕೇಸ್‌ನಲ್ಲಿ ಹಿಂದೂಗಳು ಟಾರ್ಗೆಟ್ – ಬಿಜೆಪಿ ಆಕ್ರೋಶ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ.ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ. Sign in to your account
Username or Email Address


Password

 Remember Me


