ಬೆಂಗಳೂರು: ಕಬ್ಬಿಣ ತುಂಬಿದ್ದ ಲಾರಿಯೊಂದು ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಹೊರವಲಯ ನೆಲಮಂಗಲದ ಬಳಿ ನಡೆದಿದೆ.ಗೌತಮಿ (17) ಮೃತ ದುರ್ದೈವಿ. ನೆಲಮಂಗಲ ಸಮೀಪದ ಕನ್ನಸಂದ್ರ ಬಳಿ ಕಬ್ಬಿಣ ತುಂಬಿದ್ದ ಲಾರಿಯೊಂದು ಹಿಂದಿನಿಂದ ಹೋಂಡಾ ಡಿಯೋ ಗಾಡಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಾಡಿಯಲ್ಲಿದ್ದ ಗೌತಮಿ ನೆಲಕ್ಕೆ ಬಿದ್ದಿದ್ದಾಳೆ. ಈ ವೇಳೆ ತಲೆಗೆ ಗಂಭೀರವಾಗಿ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಅಪಘಾತವಾಗುತ್ತಿದ್ದಂತೆ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictvSign in to your account
Username or Email Address


Password

 Remember Me


