ಬೆಂಗಳೂರು: ಇತ್ತೀಚೆಗೆ ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ನಟಿ ಐದ್ರಿಂತಾ ರೇ ಅವರು ಕೂಡ ಮದುವೆಯಾಗಲು ಸಿದ್ಧರಾಗುತ್ತಿದ್ದಾರೆ.ಸ್ಯಾಂಡಲ್‍ವುಡ್ ನಲ್ಲಿ ನಟಿ ಐದ್ರಿಂತಾ ರೇ ಮತ್ತು ನಟ ದಿಗಂತ್ ಸುಮಾರು 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ಬಗ್ಗೆ ಬಹಿರಂಗವಾಗಿ ಜೋಡಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈ ಹಿಂದೆ ಕೂಡ ಐಂದ್ರಿತಾ ರೇ ಅವರು ಬೇರೆಯವರ ಜೊತೆ ಮದುವೆಯಾಗುತ್ತಿದ್ದಾರೆ ಎಂದ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ದಿಗಂತ್ ಮತ್ತು ಐಂದ್ರಿತಾ ಕೂಡ ಪ್ರತಿಕ್ರಿಯಿಸಿರಲಿಲ್ಲ. ಈಗ ನಟಿ ಐಂದ್ರಿತಾ ಅವರು ಮಾಧ್ಯಮ ಸಂದರ್ಶನವೊಂದಲ್ಲಿ ತಮ್ಮ ಮದುವೆಯ ಬಗ್ಗೆ ಹೇಳಿಕೊಂಡಿದ್ದಾರೆ.ಐಂದ್ರಿತಾ ರೇ ಮತ್ತು ದಿಗಂತ್ ಮುಂದಿನ ತಿಂಗಳು ಡಿಸೆಂಬರ್ 12 ರಂದು ರಿಂಗ್ ಬದಲಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸ್ವತಃ ಐಂದ್ರಿಯಾ ಅವರೇ, “ನನ್ನ ಬೆಸ್ಟ್ ಫ್ರೆಂಡ್ ನನ್ನು ಮದುವೆಯಾಗುತ್ತಿರುವುದಕ್ಕೆ ತುಂಬಾ ಉತ್ಸುಕಳಾಗಿದ್ದೇನೆ” ಎಂದು ಸಂತಸದಿಂದ ಹೇಳಿಕೊಂಡಿದ್ದಾರೆ.ಸದ್ಯ ನಟ ದಿಗಂತ್ ತಮ್ಮ ಸ್ನೇಹಿತರ ಜೊತೆ ಶ್ರೀಲಂಕಾಕ್ಕೆ ಬ್ಯಾಚುಲರ್ ಟ್ರಿಪ್ ನಲ್ಲಿ ಇದ್ದಾರೆ. ಆದ್ದರಿಂದ ಈ ಬಗ್ಗೆ ದಿಗಂತ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


