ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಮಂಗಳೂರಿನ ನಂತೂರು ಸರ್ಕಲ್ ಬಳಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ.ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗದ ಹಿನ್ನೆಲೆ ಯಾವುದೇ ಪ್ರಾಣಾಪಾಯವಾಗಿಲ್ಲ. ಘಟನೆಯಿಂದಾಗಿ ಚಾಲಕನಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಗ್ಯಾಸ್ ಸೋರಿಕೆಯಾಗಬಹುದು ಎಂದು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ರಸ್ತೆ ಬಂದ್ ಮಾಡಿಸಿದ್ದಾರೆ. ಕದ್ರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


