ಮಂಡ್ಯ: ಬೆಳ್ಳಂಬೆಳಗ್ಗೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮಂಡ್ಯದ ಸಿದ್ದಯ್ಯನ ಗೇಟ್ ಬಳಿ ಬೈಕ್, ಕಾರ್ ಮತ್ತು ಟೆಂಪೋ ಟ್ರಾವೆಲರ್ಸ್ ನಡುವೆ ಸರಣಿ ಅಪಘಾತವಾಗಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಾದೇಶ್ (45) ಹಾಗೂ ಜೇಮ್ಸ್ (30) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಗಾರೆ ಕೆಲಸಕ್ಕೆಂದು ಮಾದೇಶ್ ಹಾಗೂ ಜೇಮ್ಸ್ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿಂದ ಬರುತ್ತಿದ್ದ ಕಾರೊಂದು ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಪಕ್ಕದಲ್ಲಿ ಚಲಿಸುತ್ತಿದ್ದ ಟೆಂಪೋ ಟ್ರಾವೆಲ್ಸ್‍ಗೆ ಗುದ್ದಿದೆ. ಅಪಘಾತದಿಂದ ಬೈಕ್ ಸವಾರರಲ್ಲಿ ಓರ್ವ ಟೆಂಪೋ ಟ್ರಾವೆಲರ್ಸ್ ಚಕ್ರಕ್ಕೆ ಸಿಲುಕಿ ಮೃತಪಟ್ಟರೆ, ಇನ್ನೋರ್ವ ರಸ್ತೆ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ. ಸದ್ಯ ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಸರಣಿ ಅಪಘಾತದಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿ ಸುಮಾರು 5 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಆಗಿ ಸಂಚಾರಿ ಅಸ್ತವ್ಯಸ್ಥಗೊಂಡಿದೆ.ಘಟನೆ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


