ಹಾವೇರಿ: ವಾಹನದ ಹಿಂಭಾಗದಲ್ಲಿಯೇ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿಯ ಆರ್.ಟಿ.ಕಚೇರಿಯ ಬಳಿ ನಡೆದಿದೆ.ಮೃತ ಚಾಲಕನನ್ನು ಕರಬಸಪ್ಪ ನಾಗಮ್ಮನವರ್(45) ಎಂದು ಗುರುತಿಸಲಾಗಿದೆ. ಕರಬಸಪ್ಪ ಹಾವೇರಿ ತಾಲೂಕು ಚಿಕ್ಕಲಿಂಗದಹಳ್ಳಿ ಗ್ರಾಮದ ನಿವಾಸಿ ಎಂದು ಹೇಳಲಾಗುತ್ತಿದೆ. ಕರಬಸಪ್ಪ ಎರಡು ಗೂಡ್ಸ್ ವಾಹನ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು.ಕಳೆದ ಎರಡು ತಿಂಗಳ ಹಿಂದೆ ಹಾವೇರಿ ತಾಲೂಕು ಹಾವನೂರು ಗ್ರಾಮದ ಬಳಿ ಅಪಘಾತವಾಗಿತ್ತು. ಅದರಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಅಪಘಾತ ಪ್ರಕರಣ ನ್ಯಾಯಾಲಯದಲ್ಲಿತ್ತು. ಆದರೆ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಗಳು ಹಲ್ಲೆ ಮಾಡಿದ್ದರು. ಇದರಿಂದ ಮನನೊಂದು ಚಾಲಕ ಕರಬಸಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ವಿಷಯ ತಿಳಿಯುತ್ತಿದ್ದ ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


