ಮಂಗಳೂರು: ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಐಸ್ ಸ್ಕೇಟಿಂಗ್ ಚಾಂಪಿಯನ್ ಶಿಪ್‍ನಲ್ಲಿ ಮಂಗಳೂರಿನ ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಎರಡು ಬೆಳ್ಳಿ ಪದಕ ಪಡೆದಿದ್ದು, ಈ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.15ನೇ ರಾಷ್ಟ್ರೀಯ ಐಸ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ್ನು ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ನವೆಂಬರ್ 17 ಹಾಗೂ 18 ರಂದು ದೆಹಲಿಯಲ್ಲಿ ಆಯೋಜಿಸಿತ್ತು. ಈ ಚಾಂಪಿಯನ್ ಶಿಪ್‍ನ 13 ವರ್ಷದೊಳಗಿನ ವಿಭಾಗದಲ್ಲಿ ಮಂಗಳೂರಿನ ಅಮಂಡಾ ಕೊನ್ಸೆಸ್ಸೊ ಭಾಗವಹಿಸಿ ಬೆಳ್ಳಿ ಪದಕ ಪಡೆದಿದ್ದಾರೆ.ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ನಗರದ ಮಾಲೆಮಾರ್ ನಿವಾಸಿಯಾದ ಫ್ರಾನ್ಸಿಸ್ ಹಾಗೂ ಡೋರಿಸ್ ದಂಪತಿಯ ಪುತ್ರಿಯಾಗಿದ್ದು, ಮಂಗಳೂರಿನ ನೀರುಮಾರ್ಗದ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿನಿಯಾಗಿದ್ದಾಳೆ. ಅಲ್ಲದೇ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಸದಸ್ಯರಾಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


