ಬೆಂಗಳೂರು: ಮಾರಕಾಸ್ತ್ರಗಳಿಂದ ಬಾಡಿ ಬಿಲ್ಡರ್ ನನ್ನು ದುಷ್ಕರ್ಮಿಗಳು ಕೊಲೆಗೈದಿರುವ ಘಟನೆ ಸೋಮವಾರ ತಡರಾತ್ರಿ ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ನಡೆದಿದೆ.ಇರ್ಫಾನ್ ಕೊಲೆಯಾದ ಬಾಡಿ ಬಿಲ್ಡರ್. ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಇರ್ಫಾನ್ ನ್ನು ಶಿವಾಜಿ ನಗರದ ಹಳೆ ಸಿಮೇಂಟ್ರಿ ರಸ್ತೆಯಲ್ಲಿ ಹೆಲ್ಮೆಟ್ ಧರಿಸಿದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದ್ದಾರೆ. ದುಷ್ಕರ್ಮಿಗಳ ದಾಳಿಗೊಳಗಾದ ಇರ್ಫಾನ್ ಪತ್ನಿ ರೋಷನ್ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ.ವಿಷಯ ತಿಳಿದ ಪತ್ನಿ ರೋಷನ್ ತಮ್ಮ ಕುಟುಂಬಸ್ಥರ ಜೊತೆ ಘಟನಾ ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಇರ್ಫಾನ್ ಜೀವ ಹೋಗಿತ್ತು. ಇರ್ಫಾನ್ ನಗರದಲ್ಲಿ ಅಕ್ವೇರಿಯಂ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದನು. ಹುಡುಗಿಯ ವಿಚಾರವಾಗಿ ಕೊಲೆ ನಡೆದಿರಬಹುದು ಎಂದು ಶಂಕೆಗಳು ವ್ಯಕ್ತವಾಗಿದೆ. ಈ ಸಂಬಂಧ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


