ಬೆಂಗಳೂರು: ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕರ್ನಾಟಕದ ಗಡಿ ಆನೇಕಲ್‍ಗೆ ಹೊಂದಿಕೊಂಡಿರುವ ಹೊಸೂರಿನಲ್ಲಿ ನಡೆದಿದೆ.ಅಂಬುಲೆನ್ಸ್ ಚಾಲಕ ಜಯ ಸೂರ್ಯ ಮತ್ತು ರೋಗಿ ಮದನ್ ಮೃತ ದುರ್ದೈವಿಗಳು. ಮತ್ತಿಬ್ಬರ ಹೆಸರು ತಿಳಿದು ಬಂದಿಲ್ಲ. ಹೊಸೂರು ಸಮೀಪದ ಸೀತಾರಾಮ್ ಮೆದು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಈ ಅಪಘಾತ ಸಂಭವಿಸಿದೆ.ಮೃತ ಮದನ್ ಹಂದಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ತಿರುಚಿಯಿಂದ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಸಂಬಂಧಿಕರು ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಹೊಸೂರು ಸಮೀಪ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದ್ದಾರೆ.ಡಿಕ್ಕಿ ಹೊಡೆದ ರಭಸಕ್ಕೆ ರೋಗಿ ಮದನ್ ಮತ್ತು ಚಾಲಕ ಸೇರಿದಂತೆ ಸಂಬಂಧಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಹೊಸೂರು ಹುಡ್ಕೋ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


