ಮೈಸೂರು: ತಾಯಿಯೊಬ್ಬಳು 2 ವರ್ಷದ ಪುಟ್ಟ ಕಂದಮ್ಮನನ್ನು ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಕುನ್ನೇಗಾಲ ಗ್ರಾಮದಲ್ಲಿ ನಡೆದಿದೆ.ಪುಟ್ಟ ಕಂದಮ್ಮ ಮಾನ್ವಿತಾಳನ್ನು ಕೊಲೆಗೈದ ಬಳಿಕ 23 ವರ್ಷದ ರಾಜೇಶ್ವರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಜೇಶ್ವರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.ಕೂಡಗಿ ಗ್ರಾಮದ ಸೋಮಣ್ಣ ಹಾಗೂ ರಾಜೇಶ್ವರಿ ಆರು ವರ್ಷಗಳು ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಈ ದಂಪತಿಗೆ ಒಂದು ಹೆಣ್ಣು ಹಾಗೂ ಗಂಡು ಮಕ್ಕಳಿದ್ದವು. ಆದ್ರೆ ರಾಜೇಶ್ವರಿ ಅವರು ಕಳೆದ 2 ವರ್ಷದಿಂದ ಕೂಡಗಿ ಗ್ರಾಮದ ವಿನೋದ ಎಂಬಾತನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದರು ಎಂದು ಪತಿ ಆರೋಪಿಸಿದ್ದಾರೆ.ಪತ್ನಿಯ ಅಕ್ರಮ ಸಂಬಂಧವನ್ನು ಪತಿ ಸೋಮಣ್ಣ ಹಲವು ಬಾರಿ ಗಮನಿಸಿದ್ದರು. ಅಲ್ಲದೇ ಆ ಬಳಿಕ ಪತ್ನಿಯನ್ನು ತವರು ಮನೆಗೆ ಬಿಟ್ಟುಬಂದಿದ್ದರು. ಇದರಿಂದ ಮನನೊಂದ ರಾಜೇಶ್ವರಿ ತನ್ನ ಮಗುವಿಗೆ ನೇಣು ಹಾಕಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


