ಕಲಬುರಗಿ: ನಗರದ ಕುಖ್ಯಾತ ರೌಡಿಶೀಟರ್ 7 ಸ್ಟಾರ್ ಪ್ರದೀಪ್ ಕಾಲಿಗೆ ಪೊಲೀಸರು ಶೂಟ್ ಮಾಡಿದ್ದು, ಗಾಯಾಳು ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಪ್ರದೀಪ್‍ನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಆದರೆ ಈ ವೇಳೆ ಪೊಲೀಸರ ಮೇಲೆಯೇ ಆತ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನ ಮಾಡುವ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ್ದನು. ಇದೇ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಆಶೋಕ ನಗರದ ಸಿಪಿಐ ಪ್ರದೀಪ್ ಕಾಲಿಗೆ ಗುಂಡಿಟ್ಟಿದ್ದಾರೆ.ಘಟನೆಯಲ್ಲಿ ಪೊಲೀಸ್ ಪೇದೆಗಳಾದ ವೆಂಕಟೇಶ್, ತೌಸಿಫ್ ಮತ್ತು ಬಸವರಾಜ್ ಅವರಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಆರೋಪಿ ಪ್ರದೀಪ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಮೇಲೆ ಕೊಲೆ ಯತ್ನ, ದರೋಡೆ, ಮೀಟರ್ ಬಡ್ಡಿ ಸೇರಿದಂತೆ 17 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ.ಪ್ರದೀಪ್ ಆಟಾಟೋಪಕ್ಕೆ ಬ್ರೇಕ್ ಹಾಕಲು ತೀರ್ಮಾನಿಸಿದ್ದ ಪೊಲೀಸರು ಆತನ ಬಂಧನಕ್ಕಾಗಿ ವಿಶೇಷ ಪೊಲೀಸ್ ತಂಡ ರಚನೆ ಮಾಡಿದ್ದರು. ಆರ್ ಜೆ ನಗರ ಠಾಣೆ ಪೊಲೀಸರಿಂದ ಪ್ರದೀಪ್ ಮೇಲೆ ರೌಡಿಶೀಟರ್ ತೆರೆಯಲಾಗಿತ್ತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


