ರಾಮನಗರ: ಬೈಕ್ ಹಾಗೂ ಕೆಎಸ್‍ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಗೆರೆ ಬಳಿ ನಡೆದಿದೆ.ಬೆಂಗಳೂರು-ಕನಕಪುರ ಮಾರ್ಗದ ಸೋಮನಹಳ್ಳಿ ಸಮೀಪದ ನೆಟ್ಟಗೆರೆ ಬಳಿ ಈ ಘಟನೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಬೆಂಗಳೂರಿನಿಂದ ಕನಕಪುರ ಕಡೆಗೆ ಕೆಎ-01 ಎಚ್ ಆರ್ -5631 ನ ಸ್ಕೂಟಿಯಲ್ಲಿ ಯುವಕ ಮತ್ತು ಯುವತಿ ಹೋಗುತ್ತಿದ್ದರು. ನೆಟ್ಟಗೆರೆ ಬಳಿ ಕೆಎಸ್ ಆರ್ ಟಿಸಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿಯಲ್ಲಿ ಮುನ್ನುಗ್ಗಿದ್ದಾರೆ.ಈ ವೇಳೆ ಬಸ್ ಸಹ ವೇಗವಾಗಿ ಚಲಿಸಿದ್ದು, ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಹ ಕೆಳಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಘಟನೆ ಸಂಬಂಧ ಕಗ್ಗಲೀಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವಗಳನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಿದ್ದಾರೆ.ಈ ಕುರಿತು ಕಗ್ಗಲೀಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


