ಧಾರವಾಡ: ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಇಂದು ಬೆಳಂಬೆಳಗ್ಗೆ ಲಾರಿ ಮತ್ತು ಖಾಸಗಿ ಬಸ್ಸಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 6 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಮೃತಪಟ್ಟವರನ್ನು ಮುಂಬೈ ಮೂಲದ ವಿಶ್ವನಾಥ್ ಮಾತ್ರೆ (76), ದಿನಕರ್ ಮಾತ್ರೆ (74), ರಮೇಶ್ ಜಯಮಾಲ (70), ಸುಮೇದ ಜಮಖಂಡಿ (65), ಲಾಹೂ ಕೆಲೋಸ್ಕರ (65), ಸುಚಿತ್ರಾ ರಾಹೂಲ್ (65) ಎಂದು ಗುರುತಿಸಲಾಗಿದೆ.ಹುಬ್ಬಳ್ಳಿಯಿಂದ ಹಂಪಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹುಬ್ಬಳ್ಳಿ- ಅಣ್ಣಿಗೇರಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಘಟನೆಯಿಂದಾಗಿ ಖಾಸಗಿ ಬಸ್ಸಿನಲ್ಲಿದ್ದ 6 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಸಾವನ್ನಪ್ಪಿದವರು ಮುಂಬೈನಿಂದ ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದು, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದರು ಎಂದು ತಿಳಿದುಬಂದಿದೆ.ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


