ಕೋಲಾರ: ಪಿಎಸ್‍ಐ ಒಬ್ಬರು ಥೇಟ್ ತೆಲುಗು ಗಬ್ಬರ್ ಸಿಂಗ್ ಸಿನಿಮಾದ ದೃಶ್ಯದಂತೆ ವ್ಯಕ್ತಿಯೊಬ್ಬರ ಮೇಲೆ ಅಮಾಮವೀಯವಾಗಿ ಥಳಿಸಿರುವ ಘಟನೆ ಜಿಲ್ಲೆಯ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಕೆಜಿಎಫ್ ತಾಲೂಕಿನ ರಾಮಸಾಗರದಲ್ಲಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಈ ವೇಳೆ ಠಾಣೆಯ ಪಿಎಸ್‍ಐ ಹೊನ್ನೇಗೌಡ ತೆಲುಗಿನ ಗಬ್ಬರ್ ಸಿಂಗ್ ಸಿನಿಮಾದ ರೀತಿಯಲ್ಲಿ ಸಂಗ್ ಪ್ಲೇ ಮಾಡಿ ಡಾನ್ಸ್ ಮಾಡುವಂತೆ ಸೂಚಿಸಿದ್ದಾರೆ.ಪಿಎಸ್‍ಐ ಹಾಡಿಗೆ ಡಾನ್ಸ್ ಮಾಡುತ್ತಾ ಇರುವ ವಿಡಿಯೋ ಸದ್ಯ ವೈರಲ್ ಆಗಿದ್ದು, ಇಬ್ಬರು ವ್ಯಕ್ತಿಗಳಿಗೆ ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ದೃಶ್ಯಗಳನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಅಲ್ಲದೇ ವಿಡಿಯೋದಲ್ಲಿ ಪೊಲೀಸರು ವ್ಯಕ್ತಿಗೆ ಹಾಡಿಗೆ ತಕ್ಕಂತೆ ಡಾನ್ಸ್ ಮಾಡಿದರೆ ಮಾತ್ರ ನೀನು ಮನೆಗೆ ಹೋಗಲು ಸಾಧ್ಯ ಎಂದು ಹೇಳುತ್ತಿರುವುದು ಕೂಡ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


