                                                              ಸಾಂದರ್ಭಿಕ ಚಿತ್ರತುಮಕೂರು: ಇಂಗ್ಲಿಷ್ ಪದ್ಯ ಹೇಳದ ವಿದ್ಯಾರ್ಥಿಗೆ ಶಿಕ್ಷಕಿಯೋರ್ವಳು ಬೆತ್ತದಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬ್ಯಾಲ್ಯದ ಸರ್ಕಾರಿ ಶಾಲೆಯ ಶಿಕ್ಷಕಿ ಸೌಮ್ಯ ಈ ರಾಕ್ಷಸಿ ಪ್ರವೃತ್ತಿ ತೋರಿದ್ದಾಳೆ. ಒಂದನೇ ತರಗತಿ ವಿದ್ಯಾರ್ಥಿ ಇಂಗ್ಲಿಷ್ ಪದ್ಯ ಹೇಳಲು ಹಾಗೂ ಇಂಗ್ಲಿಷ್ ಅಕ್ಷರ ಬರೆಯಲು ತಡವರಿಸಿದ್ದಾನೆ.ಇದರಿಂದ ಕೋಪಗೊಂಡ ಶಿಕ್ಷಕಿ ಬಾಲಕಿಗೆ ಮನಸ್ಸೋ ಇಚ್ಛೆ ಥಳಿಸಿದ್ದಾಳೆ. ಪರಿಣಾಮ ಬಾಲಕನ ಮೈಯಲ್ಲಿ ವಿಪರೀತ ಬಾಸುಂಡೆ ಎದ್ದಿದೆ. ಶಾಲೆಯಿಂದ ಮನೆಗೆ ವಾಪಸ್ ಬಂದ ನಂತರ ಬಾಲಕ ಪೋಷಕರಿಗೆ ವಿಷಯ ತಿಳಿಸಿದ್ದಾನೆ. ಆಗ ಶಿಕ್ಷಕಿ ಸೌಮ್ಯಾಳ ಕೃತ್ಯವನ್ನು ಪೋಷಕರು ಖಂಡಿಸಿದ್ದಾರೆ.ಸದ್ಯ ಗಾಯಗೊಂಡ ಬಾಲಕನಿಗೆ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


