ಚಿಕ್ಕಮಗಳೂರು: ಬೈಕ್ ಸವಾರನೋರ್ವ ಸಾರಿಗೆ ವಾಹನಕ್ಕೆ 10 ಕಿ.ಮೀ. ಸೈಡ್ ಕೊಡದೇ ಪುಂಡತನ ಮೆರೆದಿದ್ದಾನೆ. ಈ ಘಟನೆ ಜಿಲ್ಲೆಯ ಮೂಡಿಗೆರೆಯಲ್ಲಿ ಇಂದು ನಡೆದಿದ್ದು, ಬೈಕ್ ಸವಾರನ ಪುಂಡಾಟವನ್ನು ಬಸ್ ಪ್ರಯಾಣಿಕರು ತಮ್ಮ ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ.ಬಸ್ ಮಂಗಳೂರಿನಿಂದ ಬೆಂಗಳೂರಿನತ್ತ ಸಂಚರಿಸುತ್ತಿತ್ತು. ಈ ವೇಳೆ ಮೂಡಿಗೆರೆಯಿಂದ ಬರೋಬ್ಬರಿ 10 ಕಿ.ಮೀ. ತನ್ನ ಪುಂಡಾಟವನ್ನು ಮರೆದಿದ್ದಾನೆ. ಬಸ್ ಚಾಲಕ ಹಾರನ್ ಹಾಕಿದರೂ ಸೈಡ್ ಕೊಟ್ಟಿಲ್ಲ. ಕೊನಗೆ ಬಸ್ ನಲ್ಲಿದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರಯಾಣಿಕರು ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಬೈಕ್ ಸವಾರ ಕೂಡಲೇ ಪರಾರಿಯಾಗಿದ್ದಾನೆ. ಮೂಡುಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


