ಬಾಗಲಕೋಟೆ: ನಗರದ ಮುಚಖಂಡಿ ಕ್ರಾಸ್‍ನಲ್ಲಿ ಲಾರಿಯೊಂದು ಶಾಲಾ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸು ಟಂಟಂಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಇದ್ದ ಶಾಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೆಳಂಬೆಳಗ್ಗೆ ನಗರದ ವಿದ್ಯಾಗಿರಿಯ ಲಯನ್ಸ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಇದ್ದ ಶಾಲಾ ಬಸ್ಸಿಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಪಕ್ಕದಲ್ಲಿ ಚಲಿಸುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ. ತಕ್ಷಣ ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ.ಘಟನಾ ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಸುರಕ್ಷಿತವಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


