ಹಾಸನ: ಬೈಕಿಗೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ಕಳೆದ ರಾತ್ರಿ ನಡೆದಿದೆ.ಸೋಮಶೇಖರ್(38) ಮೃತ ದುರ್ದೈವಿ. ಸೋಮಶೇಖರ್ ಪಟ್ಟಣದ ಜೆಪಿ ನಗರದ ನಿವಾಸಿಯಾಗಿದ್ದು, ಧರ್ಮಸ್ಥಳ ಸ್ವಸಹಾಯ ಸಂಘದಲ್ಲಿ ಜೀಪ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸದ್ಯ ಸೋಮಶೇಖರ್ ಕೆಲಸ ಮುಗಿಸಿ ಬರುವಾಗ ಈ ಅಪಘಾತ ಸಂಭವಿಸಿದೆ.ಸೋಮಶೇಖರ್ ಕರ್ತವ್ಯ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಸೋಮಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡಲೇ ಸ್ಥಳೀಯರು ಲಾರಿಯನ್ನು ಹಿಡಿದು ಬೆನ್ನಟ್ಟಿದ್ದು, ಚಾಲಕ ಪರಾರಿಯಾಗಿದ್ದಾನೆ.ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರಿಂದ ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಪೆಟ್ರೋಲ್ ಬಂಕ್ ಬಳಿ ಹಂಪ್ಸ್ ಹಾಕದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಪ್ರತಿಭಟನೆಯಿಂದಾಗಿ ಕೆಲಕಾಲ ಸಂಚಾರಕ್ಕೆ ಅಡಚಣೆಯಾಯಿತು. ಸದ್ಯ ಈ ಬಗ್ಗೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


