ಬೆಂಗಳೂರು: ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಮನಬಂದಂತೆ ನಾಡಗೀತೆ ಹಾಡುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸಾಹಿತ್ಯ ಪರಿಷತ್ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಸಪಾ ಅಧ್ಯಕ್ಷರಾದ ಮನು ಬಳಿಗಾರ್, ಎರಡೂವರೆ ನಿಮಿಷಗಳ ಕಾಲ ನಾಡಗೀತೆ ಹಾಡಲು ಸಮಯ ನಿಗದಿ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಈಗಾಗಲೇ 8 ನಿಮಿಷ, 9 ನಿಮಿಷ ನಾಡಗೀತೆ ಹಾಡುತ್ತಿದ್ದಾರೆ. ಸಾಹಿತಿ ನಿಸ್ಸಾರ್ ಅಹಮದ್ ಸೇರಿದಂತೆ ಹಲವು ಹಿರಿಯ ಸಾಹಿತಿಗಳು ನಾಡಗೀತೆಯನ್ನು 2.30 ನಿಮಿಷ ಹಾಡಬೇಕು ಒತ್ತಾಯ ಮಾಡಿದ್ದರು. ಈ ಕರಿತು ಕನ್ನಡ ಸಾಹಿತ್ಯ ಪರಿಷತ್ತಿಗೆ ಮನವಿ ಮಾಡಿ ಪತ್ರ ಕೂಡ ಬರೆದಿದ್ದರು. ಅದ್ದರಿಂದ ಕಸಪಾ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದೆ ಎಂದರು.ಅಂತರರಾಷ್ಟ್ರೀಯ ಖ್ಯಾತ ಹಿನ್ನೆಲೆ ಗಾಯಕರು ಕೂಡ ಎರಡೂವರೆ ನಿಮಿಷ ಕಾಲ ನಾಡಗೀತೆಯನ್ನು ಹಾಡಿದ್ದಾರೆ. ಹಾಗಾಗಿ ಈ ಸಮಯವನ್ನು ನಿಗದಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದು, ಸರ್ಕಾರ ಇದನ್ನು ಜಾರಿಗೆ ತರಬೇಕು ಎಂದು ಹೇಳಿದರು.ಕಸಾಪ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಲವು ಸಾಹಿತಿಗಳು, ಕನ್ನಡಪರ ಚಿಂತಕರು, ಹೋರಾಟಗಾರರು ಮತ್ತು ಹಾಡುಗಾರರು ಭಾಗಿಯಾಗಿದ್ದರು. ಈ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು. ಸುದ್ದಿಗೋಷ್ಠಿಗೂ ಮುನ್ನ ನಡೆದ ಸಭೆಯಲ್ಲಿ ಸಾಹಿತಿ ಚಂದ್ರಶೇಖರ್ ಕಂಬಾರ್, ಸಿದ್ದಲಿಂಗಯ್ಯ, ಕಮಲಾ ಹಂಪನಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


