ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲೂಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಭಾರೀ ಅನಾಹುತ ತಪ್ಪಿದ್ದು, ಬಸ್‍ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹಾನಗಲ್ ತಾಲೂಕು ಆಡೂರು ಗ್ರಾಮದ ಮೈನುದೀನ್ (26) ಮೃತ ಚಾಲಕ. ಶಿಗ್ಗಾಂವಿ ತಾಲೂಕು ನೀರಲಗಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿದ್ದ ಆರು ಜನರಿಗೆ ಗಾಯವಾಗಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಘಟನೆಯ ವಿವರ: ಆಡೂರು ಗ್ರಾಮ ಕೆಲವರು ಕೂಲಿ ಕೆಲಸಕ್ಕಾಗಿ ಹುಬ್ಬಳ್ಳಿಗೆ ಟ್ರ್ಯಾಕ್ಟರ್ ನಲ್ಲಿ ಹೋಗುತ್ತಿದ್ದರು. ನೀರಲಗಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಗೆ ಟ್ರ್ಯಾಕ್ಟರ್ ಬರುತ್ತಿದ್ದಂತೆ ವೇಗವಾಗಿ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರ್ಯಾಕ್ಟರ್ ಎಂಜಿನ್ ಪಲ್ಟಿಹೊಡೆದು ಅದರ ಕೆಳಗೆ ಚಾಲಕ ಮೈನುದೀನ್ ಸಿಲುಕಿ ಮೃತಪಟ್ಟಿದ್ದಾನೆ.ಅದೃಷ್ಟವಶಾತ್ ಟ್ರೈಲರ್ ನಲ್ಲಿ ಕುಳಿತಿದ್ದ ಜನರು ಹಾಗೂ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಭೇಟಿ ನೀಡಿದ ತಡಸ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


