ಮೈಸೂರು: ನಗರದ ಮಂಡಕಳ್ಳಿ ವಿಮಾನ ನಿಲ್ದಾಣದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.ಮಂಗಳವಾರ ರಾತ್ರಿ ಮೈಸೂರು ವಿಮಾನ ನಿಲ್ದಾಣದಿಂದ ಚೆನ್ನೈಗೆ ಹೋಗುವ ವಿಮಾನಕ್ಕೆ ಕುಟುಂಬಸ್ಥರನ್ನು ನಿಲ್ದಾಣಕ್ಕೆ ಬಿಟ್ಟು ವಾಪಾಸ್ ತೆರಳುವಾಗ ಮೈಸೂರಿನ ವ್ಯಕ್ತಿಯೊಬ್ಬರ ಕಾರಿಗೆ ಚಿರತೆ ಅಡ್ಡ ಬಂದಿದೆ.ವಿಮಾನ ನಿಲ್ದಾಣದ ಆವರಣದಲ್ಲೇ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸದ್ಯ ಈ ಚಿರತೆಯಿಂದ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ಮತ್ತು ಸ್ಥಳೀಯ ಭದ್ರತಾ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ. ಈ ಹಿಂದೆ ಈ ಸ್ಥಳದಲ್ಲೇ ಚಿರತೆ ಕಾಣಿಸಿಕೊಂಡಿದ್ದ ವೇಳೆ ಅರಣ್ಯ ಇಲಾಖೆ ಬೋನನ್ನು ಇಟ್ಟು ಚಿರತೆಯನ್ನು ಹಿಡಿದಿತ್ತು.ಸದ್ಯ ಇದೀಗ ಮತ್ತೆ ಚಿರತೆ ಕಾಣಿಸಿಕೊಳ್ಳುತ್ತಿರುವ ಕಾರಣ ಶಾಶ್ವತವಾಗಿ ವಿಮಾನ ನಿಲ್ದಾಣದ ಆವರಣದಲ್ಲಿ ಬೋನ್ ಇಡಬೇಕಾದ ಪರಿಸ್ಥಿತಿ ಬಂದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


