ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ.ಮಲೆಬೆನ್ನೂರು ಪುರಸಭೆಯ ಕಾಂಗ್ರೆಸ್ ಸದಸ್ಯ ಅಬ್ದುಲ್ ಲತೀಫ್ ಮತ್ತು ಆತನ ಸ್ನೇಹಿತರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಈ ಜಾಲದ ಖಚಿತ ಮಾಹಿತಿಯನ್ನು ಆಧರಿಸಿ ಮಲೆಬೆನ್ನೂರು ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಅಬ್ದುಲ್ ಲತೀಫ್, ಸರ್ ಅಲಿ, ರಜಾಕ್, ನಧೀರ್ ನನ್ನು ಬಂಧಿಸಿದ್ದಾರೆ.ರಾಜ್ಯ ಸರ್ಕಾರದಿಂದ ಬಡವರಿಗೆ ಸೇರಬೇಕಿದ್ದ ನೂರಾರು ಕ್ವಿಂಟರ್ ಅನ್ನಭಾಗ್ಯದ ಅಕ್ಕಿ ಮಾರಾಟ ದಂಧೆಯನ್ನು ಅಬ್ದುಲ್ ಲತೀಫ್ ಹಾಗೂ ತಂಡ ಅಕ್ರಮವಾಗಿ ನಡೆಸುತ್ತಿದ್ದರು. ಕದ್ದ ಅಕ್ಕಿಯನ್ನು ಪಾಲಿಶ್ ಮಾಡಿಸಿ, ನಂತರ ಪ್ಯಾಕೇಟ್ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದರು. ಬಂಧಿತರಿಂದ 17 ಟನ್ ಅನ್ನಭಾಗ್ಯದ ಅಕ್ಕಿ ಹಾಗೂ ಒಂದು ಲಾರಿಯನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.ಈ ದಾಳಿಯು ಡಿಸಿಪಿ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ನಡೆದಿದ್ದು, ಆರೋಪಿಗಳ ಮೇಲೆ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


