ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಜನಾರ್ದನ್(52), ಸುಷ್ಮಿತ, ಸುದರ್ಶಿನಿ(29) ಹಾಗೂ ಸೋನಿಕ(6) ಮೃತ ವ್ಯಕ್ತಿಗಳು. ತಂದೆ, ತಾಯಿ, ಮಗಳು ಹಾಗೂ ಮೊಮ್ಮಗಳು ಮೃತಪಟ್ಟಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೇ ಮಗುವಿನ ಮುಖಕ್ಕೆ ಪ್ಲಾಸ್ಟಿಕ್ ಹಾಕಿ ಉಸಿರುಗಟ್ಟಿ ಕೊಲೆ ಮಾಡಿದ್ದಾರೆ.ಜನಾರ್ದನ್ ಮನೆ ತೆಗೆದುಕೊಳ್ಳುವ ಸಲುವಾಗಿ 25 ಲಕ್ಷ ರೂ. ಹಣವನ್ನು ನೀಡಿದ್ದರು. ಆದರೆ ಹಣ ಪಡೆದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಹಣ ಪಡೆದ ವ್ಯಕ್ತಿ ಸಾವನ್ನಪ್ಪಿದ್ದರಿಂದ ನಮ್ಮ ಹಣ ವಾಪಸ್ ಬರುವುದಿಲ್ಲ ಎಂದು ಬೇಸರ ಜನಾರ್ದನ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಜನಾರ್ದನ್ ತನ್ನ ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿದ್ದು, ಅದರಲ್ಲಿ ಮನೆ ಖರೀದಿ ಬಗ್ಗೆ ಉಲ್ಲೇಖಿಸಿದ್ದಾರೆ. ಸದ್ಯ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.ಈ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


