ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ಸಾವಿಗೆ ನಟ ಗಣೇಶ್ ಮತ್ತು ಅವರ ಪತ್ನಿ ಶಿಲ್ಪಾ ಗಣೇಶ್ ಇಬ್ಬರು ಸಂತಾಪ ಸೂಚಿಸಿದ್ದಾರೆ.ಶಿಲ್ಪಾ ಗಣೇಶ್ ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಉಪಾಧ್ಯಕ್ಷೆಯಾಗಿದ್ದು, ಟ್ವೀಟ್ ಮಾಡುವ ಮೂಲಕ ಅನಂತಕುಮಾರ್ ಅವರ ನಿಧನಕ್ಕೆ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಗಣೇಶ್ ಕೂಡ ಟ್ವೀಟ್ ಮಾಡಿದ್ದಾರೆ.“ಅನಂತಕುಮಾರ್ ಅವರು, ಬಿಜಿಪಿ ಪಕ್ಷವನ್ನು ಬಲಪಡಿಸಲು ಹಾಗೂ ದೇಶ ಸೇವೆ ಮಾಡಲು ತಮ್ಮ ಜೀವನವನ್ನೇ ಅವರು ಮುಡಿಪಾಗಿಟ್ಟಿದ್ದರು. ಅವರ ನಿಧನದಿಂದ ತುಂಬಾ ದುಃಖವಾಗಿದೆ. ಅವರ ಕುಟುಂದವರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.Saddened by the untimely demise of Ananth Kumar ji who dedicated his entire life towards strengthening BJP & in the service of the Nation. My deepest condolences to his family & loved ones. pic.twitter.com/HGNBSth4Mu— Shilpa Ganesh (@ShilpaaGanesh) November 12, 2018ನಟ ಗಣೇಶ್ ಕೂಡ ಅನಂತ್ ಕುಮಾರ್ ಅವರ ಬಗ್ಗೆ ಟ್ವೀಟ್ ಮಾಡಿದ್ದು, “ಅನಂತ್ ಕುಮಾರ್ ಒಬ್ಬ ವಿಭಿನ್ನ ವ್ಯಕ್ತಿತ್ವ ಹೊಂದಿರುವ ನಾಯಕರಾಗಿದ್ದರು. ಅವರ ಇಡೀ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸುತ್ತೇನೆ.” ಎಂದು ಬರೆದು ಅನಂತಕುಮಾರ್ ಫೋಟೋ ಹಾಕಿ ಬೇಸರ ವ್ಯಕ್ತಪಡಿಸಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ ಕೇಂದ್ರ ಸಚಿವ ಅನಂತಕುಮಾರ್ ಕೊನೆಯುಸಿರೆಳೆದಿದ್ದಾರೆ. ರಾಜಕೀಯ ನಾಯಕರು, ಮುಖಂಡರು ಅವರ ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ನಾಳೆ ಚಾಮರಾಜಪೇಟೆಯಲ್ಲಿರುವ ರುದ್ರಭೂಮಿಯಲ್ಲಿ ಅನಂತಕುಮಾರ್ ಅಂತ್ಯಕ್ರಿಯೆ ನಡೆಯಲಿದೆ.My deepest condolences to all the family members and the loved ones of Shri.Ananthkumar. He was a distinguished personality. RIP pic.twitter.com/9tmL0Fjver— Ganesh (@Official_Ganesh) November 12, 2018ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


