ರಾಯಚೂರು: ನವಜಾತ ಶಿಶುವಿಗೆ ಪೊಲೀಯೋ ಲಸಿಕೆ ಹಾಕಿಸಿಕೊಂಡು ಬರುತ್ತೇನೆಂದು ಹೇಳಿ, ನಕಲಿ ನರ್ಸ್ ವೊಬ್ಬರು ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಲಿಂಗಸೂಗೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.ಮಾರಲದಿನ್ನಿ ತಾಂಡ ನಿವಾಸಿಗಳಾದ ಪೋಷಕರು ಮಗು ಕಳುವಾಗಿದೆ. ಶುಕ್ರವಾರ ಬೆಳಗ್ಗೆ 6 ಗಂಟೆಗೆ ನವಜಾತ ಶಿಶು ಜನಿಸಿತ್ತು. ಇಂದು ಮಧ್ಯಾಹ್ನ ಆಸ್ಪತ್ರೆಯಲ್ಲಿದ್ದ ತಾಯಿ ಹಾಗೂ ಅಜ್ಜಿಗೆ ತಾನು ನರ್ಸ್ ಎಂದು ಅಪರಿಚಿತ ಮಹಿಳೆಯೊಬ್ಬಳು ಪರಿಚಯ ಮಾಡಿಕೊಂಡಿದ್ದಾಳೆ. ಈ ವೇಳೆ ದಾಖಲೆಗಳಿಗೆ ಸಹಿ ಹಾಕಬೇಕೆಂದು ಅಜ್ಜಿಯನ್ನು ಕಳುಹಿಸಿಕೊಟ್ಟಿದ್ದಾರೆ.ನಂತರ ತಾಯಿಗೆ ಮಗುವಿಗೆ ಪೊಲೀಯೋ ಲಸಿಕೆ ಹಾಕಬೇಕೆಂದು ಹೇಳಿ, ಮಗುವನ್ನು ಎತ್ತಿಕೊಂಡು ಹೋಗಿದ್ದಾಳೆ. ಆದರೆ ಮಗುವನ್ನು ತೆಗೆದುಕೊಂಡ ಹೋದ ನರ್ಸ್ ಎಷ್ಟೇ ಸಮಯ ಕಳೆದರು ಬಂದಿಲ್ಲ. ಇದರಿಂದ ಅನುಮಾನಗೊಂಡು ಆಸ್ಪತ್ರೆ ಸಿಬ್ಬಂದಿ ಬಳಿ ವಿಚಾರಿಸಿದಾಗ, ಮಗು ಕಳುವಾಗಿರುವ ಕುರಿತು ತಿಳಿದು ಬಂದಿದೆ.ಕೂಡಲೇ ಆಸ್ಪತ್ರೆಗೆ ಸಿಬ್ಬಂದಿ ಎಲ್ಲಾ ಸಿಸಿಟಿವಿಯ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಪರಿಚಿತ ಮಹಿಳೆಯ ಯಾರು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆದರೆ ತಾಯಿ ತನ್ನ ಒಂದು ದಿನದ ಹಸುಗೂಸನ್ನು ಕಳೆದುಕೊಂಡು, ದುಃಖಸಾಗರದಲ್ಲಿ ಮುಳುಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


