ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಬಳಿ ನಡೆದಿದೆ.ದಿಯಾ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿನಿ. ದಿಯಾ 10ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಳು. ಪಲ್ಟಿಯಾದ ಬಸ್ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಪೂರ್ಣಪ್ರಜ್ಞಾ ಶಾಲೆಗೆ ಸೇರಿದ್ದು ಎಂದು ತಿಳಿದುಬಂದಿದೆ.ವಿದ್ಯಾರ್ಥಿಗಳು ಪ್ರವಾಸದ ಹಿನ್ನೆಲೆ ಶೃಂಗೇರಿಗೆ ಆಗಮಿಸಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳು ವಿದ್ಯಾರ್ಥಿಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸದ್ಯ ಈ ಬಗ್ಗೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


