ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿಯ ಪೋಷಕರು ತಮ್ಮ ಮಗಳ ಅಂಗಾಗ ದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ದಿಯಾ(16) ಅಪಘಾತದಲ್ಲಿ ಮೃತಪಟ್ಟಿದ್ದ ವಿದ್ಯಾರ್ಥಿನಿ. ದಿಯಾ ತಂದೆ ರಾಜೇಂದ್ರ ಸಿಂಗ್ ಶೇರಾವತ್ ನಿವೃತ್ತ ಕರ್ನಲ್ ಆಗಿದ್ದು, ಸದ್ಯ ಅವರು ತಮ್ಮ ಮಗಳ ಕಣ್ಣನ್ನು ಮಗಳ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ದಾನ ಮಾಡಿದ್ದಾರೆ.ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ವಿದ್ಯಾರ್ಥಿನಿ ಮೃತಪಟ್ಟಿದ್ದಳು. 20ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ ಗಾಯವಾಗಿತ್ತು. ಬಸ್ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪೂರ್ಣಪ್ರಜ್ಞಾ ಶಾಲೆಗೆ ಸೇರಿದ್ದು, ಶಾಲಾ ಪ್ರವಾಸ ಹಿನ್ನೆಲೆ ಬೆಳಗಿನ ಜಾವ ಶೃಂಗೇರಿಗೆ ಕಡೆ ಆಗಮಿಸುತ್ತಿತ್ತು. ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗಾಯಾಳು ವಿದ್ಯಾರ್ಥಿಗಳನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಈ ಬಗ್ಗೆ ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnewsSign in to your account
Username or Email Address


Password

 Remember Me


