ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡಬಾರದು ಎಂದು ಹೈಕಮಾಂಡ್ ರಾಜ್ಯ ಬಿಜೆಪಿ ನಾಯರಕರಿಗೆ ಖಡಕ್ ಸಂದೇಶವನ್ನು ರವಾನಿಸಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.ಜನಾರ್ದನ ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಮಾಹಿತಿಯನ್ನು ಹೈಕಮಾಂಡ್ ಪಡೆದುಕೊಂಡಿದ್ದು, ಗಣಿ ಧಣಿ ಪರ ಅಥವಾ ವಿರೋಧ ಹೇಳಿಕೆ ನೀಡದಂತೆ ಸೂಚಿಸಿದೆ. ಜನಾರ್ದನ ರೆಡ್ಡಿ ಜೊತೆಗಿನ ನಿಮ್ಮ ಸ್ನೇಹ ವೈಯಕ್ತಿಕ. ನಿಮ್ಮ ಹೇಳಿಕೆ ಪಕ್ಷದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆಗಳಿದ್ದು, ಇದು ಮುಂದಿನ ಲೋಕಸಭಾ ಚುನಾವಣೆಯ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರಂತೆ.ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿಯೇ ರೆಡ್ಡಿಗೂ ಮತ್ತು ಬಿಜೆಪಿಗೆ ಯಾವುದೇ ಸಂಬಂಧವಿಲ್ಲ ಅಂತಾ ಹೇಳಲಾಗಿದೆ. ಇದೇ ನಿಲುವುವನ್ನು ರಾಜ್ಯ ಬಿಜೆಪಿ ನಾಯಕರು ಪ್ರದರ್ಶಿಸಬೇಕು ಎಂದು ಹೈಕಮಾಂಡ್ ಖಡಕ್ ಎಚ್ಚರಿಕೆಯನ್ನು ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


