ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಮಿಲನ ಪ್ರಕಾಶ್ ಅವರು ಮತ್ತೊಂದು ಸಿನಿಮಾ ಮಾಡಲು ಮುಂದಾಗಿದ್ದಾರೆ.ಈ ಹಿಂದೆ ತಾರಕ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದ ಪ್ರಕಾಶ್ ಅವರು ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಮತ್ತೊಂದು ಸಿನಿಮಾ ಮಾಡಬೇಕೆಂಬ ಯೋಜನೆಯಲ್ಲಿದ್ದಾರೆ. ಇಬ್ಬರು ಜೊತೆಯಲ್ಲಿ ಮಾಡುತ್ತಿರುವುದು 2 ನೇ ಸಿನಿಮಾವಾಗಿದ್ದು, ನಿದೇರ್ಶಕರಾದ ಪ್ರಕಾಶ್ ಅವರ ಸಮ್ಮುಖದಲ್ಲಿ ಚಿತ್ರದ ಕಥೆಯ ಕೆಲಸಗಳು ನಡೆಯುತ್ತಿವೆ. ಈ ಚಿತ್ರದ ಕಥೆ ವಿಭಿನ್ನ ರೀತಿಯಲ್ಲಿದ್ದು, ಬೇಗನೆ ಚಿತ್ರದ ಟೈಟಲ್ ಹಾಗೂ ಸಿನಿಮಾವನ್ನು ತಿಳಿಸುವುದಾಗಿ ಹೇಳಿದ್ದಾರೆ.ಚಾಲೆಂಜಿಂಗ್ ದರ್ಶನ್ ಅವರಿಗೆ ಕಾರ್ ಅಪಘಾತ ಸಂಭವಿಸಿದ್ದು, ಈಗ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಗಾಯದ ನೋವಿನಲ್ಲೂ ತಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ.ಸದ್ಯಕ್ಕೆ ದಚ್ಚು `ಒಡೆಯ’ ಸಿನಿಮಾದ ಒಂದು ಶೆಡ್ಯೂಲ್ ಕಂಪ್ಲೀಟ್ ಮಾಡಿದ್ದರು. ಅಪಘಾತವಾದ ಮರುದಿನದಿಂದ ಒಡೆಯ ಸಿನಿಮಾದ ಶೂಟಿಂಗ್ ಬೆಂಗಳೂರಿನಲ್ಲಿ ಶುರುವಾಗಬೇಕಿತ್ತು. ಆದ್ರೆ ಅದನ್ನು ಮುಂದೂಡಲಾಗಿತ್ತು. ಆದರೆ ವಿಶ್ರಾಂತಿಯ ಜೊತೆಗೆ `ಯಜಮಾನ’ ಚಿತ್ರದ ಡಬ್ಬಿಂಗ್ ಕೆಲಸವನ್ನು ಮುಗಿಸಿದ್ದಾರೆ. ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಅಂದ್ರೆ ನವೆಂಬರ್ 20ರಿಂದ ದರ್ಶನ್ ಚಿತ್ರೀಕರಣಕ್ಕೆ ಎಂಟ್ರಿಯಾಗಲಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


