ಬೆಂಗಳೂರು: ಕನ್ನಡದ ಮೊದಲ ವಿಜ್ಞಾನ ಪತ್ರಿಕೆ ‘ವಿಜ್ಞಾನ’ ಪ್ರಕಟವಾಗಿ ಇದೀಗ ನೂರು ವರ್ಷ ಸಂದಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿನ ಬಿ. ವಿ. ಜಗದೀಶ್ ವಿಜ್ಞಾನ ಕೇಂದ್ರವು ಇಜ್ಞಾನ ಟ್ರಸ್ಟ್ ಹಾಗೂ ಉದಯಭಾನು ಕಲಾಸಂಘದ ಸಹಯೋಗದೊಡನೆ ಸಂವಾದ ಕಾರ್ಯಕ್ರಮವೊಂದನ್ನು ಏರ್ಪಡಿಸಿದೆ.ಈ ಕಾರ್ಯಕ್ರಮ ಬರುವ ನವೆಂಬರ್ 11ರಂದು ಬೆಳಿಗ್ಗೆ 10 ಗಂಟೆಯಿಂದ ಜಯನಗರದ ನ್ಯಾಶನಲ್ ಕಾಲೇಜು ಆವರಣದಲ್ಲಿರುವ ಬಿ. ವಿ. ಜಗದೀಶ್ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ. ಕನ್ನಡದ ಮುದ್ರಣ ಮಾಧ್ಯಮ, ಟೀವಿ, ರೇಡಿಯೋ ಹಾಗೂ ಜಾಲತಾಣಗಳಲ್ಲಿ ವಿಜ್ಞಾನ ಸಂವಹನದ ಸ್ಥಿತಿ-ಗತಿಗಳನ್ನು ಕುರಿತು ಆಯಾ ಕ್ಷೇತ್ರದ ಪರಿಣತರೊಡನೆ ಈ ಸಂದರ್ಭದಲ್ಲಿ ಚರ್ಚೆಗೆ ಅವಕಾಶ ಇರಲಿದೆ.ದಿವಂಗತ ಬೆಳ್ಳಾವೆ ವೆಂಕಟನಾರಣಪ್ಪ ಹಾಗೂ ನಂಗಪುರಂ ವೆಂಕಟೇಶ ಅಯ್ಯಂಗಾರರು 1918ರಲ್ಲಿ ಪ್ರಾರಂಭಿಸಿದ್ದ ‘ವಿಜ್ಞಾನ’ ಪತ್ರಿಕೆ ಕನ್ನಡ ಪತ್ರಿಕೋದ್ಯಮದಲ್ಲೊಂದು ಮಹತ್ವದ ಮೈಲಿಗಲ್ಲು. ವಿಜ್ಞಾನ ಬರಹಗಳನ್ನು ಸಾಮಾನ್ಯ ಓದುಗರಿಗೂ ಪರಿಚಯಿಸಿದ ಈ ಅಪರೂಪದ ಪ್ರಯತ್ನದ ಕುರಿತು ಇದೇ ಸಂದರ್ಭದಲ್ಲಿ ಪ್ರೊ. ಎಚ್. ಆರ್. ರಾಮಕೃಷ್ಣರಾವ್ ಉಪನ್ಯಾಸ ನೀಡಲಿದ್ದಾರೆ. ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


