ಗದಗ: ಕರ್ತವ್ಯ ನಿರತ ವೇಳೆಯೇ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಯೋಧರೊಬ್ಬರು ಅಸ್ಸಾಂನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಬಸನಗೌಡ ಪಾಟೀಲ್ (39) ಮೃತ ಯೋಧ. ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರಾಗಿದ್ದು, ಕಳೆದ 19 ವರ್ಷದಿಂದ ಸಿಆರ್‍ಪಿಎಫ್ ನಲ್ಲಿ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೇ ಅವರ ನಿವೃತ್ತಿಗೆ ಕೇವಲ ಒಂದೇ ವರ್ಷ ಬಾಕಿ ಇರುವಾಗಲೇ ನಿಧನರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳುತ್ತಲೇ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಇಂದು ಅಸ್ಸಾಂನಲ್ಲಿ ಕರ್ತವ್ಯದಲ್ಲಿರುವಾಗಲೇ ಬಸನಗೌಡ ಪಾಟೀಲ್‍ಗೆ ಹೃದಯಾಘಾತವಾಗಿದ್ದು, ಕೂಡಲೇ ಸಿಬ್ಬಂದಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಯೋಧ ಮೃತಪಟ್ಟ ಸುದ್ದಿಯನ್ನು ಸಿಆರ್‍ಪಿಎಫ್ ಅಧಿಕಾರಿಗಳು ಜಿಲ್ಲಾಡಳಿತ ಕಚೇರಿಗೆ ಮಾಹಿತಿ ನೀಡಿದ್ದು, ಸೋಮವಾರ ಸಾಯಂಕಾಲ ಸ್ವಗ್ರಾಮಕ್ಕೆ ಬಸನಗೌಡ ಪಾಟೀಲ್‍ರ ಪಾರ್ಥಿವ ಶರೀರ ಬರಲಿದೆ. ಜಿಲ್ಲಾಡಳಿತ ಯೋಧನ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


