ಬೆಳಗಾವಿ: ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿರಡಾಣ ಗ್ರಾಮದಲ್ಲಿ ನಡೆದಿದೆ.ಶಿರಡಾಣ ಗ್ರಾಮದ ಟ್ಯಾಂಕರ್‍ನಲ್ಲಿದ್ದ ಕಲುಷಿತ ನೀರು ಸೇವಿಸಿದ ಗ್ರಾಮಸ್ಥರು ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಅದಕ್ಕಾಗಿ ವೈದ್ಯರ ತಂಡ ಗ್ರಾಮದಲ್ಲೇ ಚಿಕಿತ್ಸೆ ನೀಡುತ್ತಿದೆ. ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಘಟಪ್ರಭಾ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಕಳೆದ ಎರಡು ವರ್ಷಗಳಿಂದ ಟ್ಯಾಂಕರ್ ಸ್ವಚ್ಚ ಮಾಡದೆ ನೀರು ಪೂರೈಸುತ್ತಿರುವುದೇ ಇದಕ್ಕೆ ಕಾರಣವಾಗಿದ್ದಲ್ಲದೇ, ಗ್ರಾಮ ಪಂಚಾಯತಿ ನಿರ್ಲಕ್ಷ್ಯವೂ ಕೂಡಾ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿಸುತ್ತಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


