ಬಾಗಲಕೋಟೆ: ಮೀನು ಹಿಡಿಯಲು ಹೋಗಿ ಮೂವರು ನೀರುಪಾಲಾದ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಯಡಳ್ಳಿ ಗ್ರಾಮದ ಬಳಿಯ ಘಟಪ್ರಭಾ ನದಿಯಲ್ಲಿ ನಡೆದಿದೆ.ಪರಶುರಾಮ(27), ಕೈಲಾಸ್ ವಾಗ್ಮೋರೆ(30) ಮತ್ತು ರಾಮಕೃಷ್ಣ(42) ಮೃತ ದುರ್ದೈವಿಗಳು. ಮೂವರು ಮಹಾರಾಷ್ಟ್ರ ಮೂಲದವರಾಗಿದ್ದು, ಕಬ್ಬು ಕಡಿಯುವ ಕಾರ್ಮಿಕರೆಂದು ತಿಳಿದು ಬಂದಿದೆ. ಈ ಮೂವರು ಶನಿವಾರ ಸಂಜೆ ವೇಳೆ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾರೆ. ಆದರೆ ಮೀನು ಹಿಡಿಯಲು ಹೋಗಿ ಈಜು ಬಾರದೆ ಮೂವರು ನೀರು ಪಾಲಾಗಿ ಮೃತಪಟ್ಟಿದ್ದಾರೆ.ಈ ಬಗ್ಗೆ ಸ್ಥಳದಲ್ಲಿದ್ದವರು ಮುಧೋಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೂವರ ಮೃತದೇಹಕ್ಕಾಗಿ ಹುಡುಕಾಟ ನಡೆಸಿ ಕೊನೆಗೆ ಶವಗಳನ್ನು ಹೊರತೆಗೆದಿದ್ದಾರೆ.ಸದ್ಯಕ್ಕೆ ಮುಧೋಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


