ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಬಂದಕುಂಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈಗ ಶಾಲೆಯಿಂದ ಅಮಾನತುಗೊಂಡಿದ್ದಾನೆ.ದಾಧಾಫೀರ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಅಮಾನತಾದ ಶಿಕ್ಷಕ. ಈತ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ. ತರಗತಿ ಮಾಡುವ ನೆಪದಲ್ಲಿ ವಿದ್ಯಾರ್ಥಿನಿಯ ಬಳಿ ಹೋಗಿ ಆಕೆಯ ಮೈ-ಕೈ ಮುಟ್ಟಿ ಲೈಂಗಿಕವಾಗಿ ಕಿರುಕುಳ ನೀಡಿದ್ದಾನೆ. ಅಷ್ಟೇ ಅಲ್ಲದೇ ಮಾತನಾಡಬೇಕು ಹೊರಗಡೆ ಹೋಗೋಣ ಬಾ ಎಂದು ಕರೆಯುತ್ತಿದ್ದನು ಎಂದು ತಿಳಿದು ಬಂದಿದೆ.ಶಿಕ್ಷಕನ ಕಿರುಕುಳ ತಾಳಲಾಗದೆ ವಿದ್ಯಾರ್ಥಿನಿ ಕಳೆದ 15 ದಿನಗಳಿಂದ ಶಾಲೆಗೆ ಹೋಗದೆ ಮನೆಯಲ್ಲಿ ಉಳಿದುಕೊಂಡಿದ್ದಾಳೆ. ಮನೆಯಲ್ಲಿ ಮಂಕಾಗಿ ಕುಳಿತ್ತಿದ್ದ ಮಗಳನ್ನು ನೋಡಿ ಪೋಷಕರು ಅನುಮಾನಗೊಂಡು ವಿಚಾರಣೆ ಮಾಡಿದಾಗ ಶಿಕ್ಷಕನ ಕಿರುಕುಳ ಬೆಳಕಿಗೆ ಬಂದಿದೆ.ಶಿಕ್ಷಕನ ಬಗ್ಗೆ ತಿಳಿದ ಪೋಷಕರು ಬಿಇಓಗೆ ದೂರು ಸಲ್ಲಿಸಿದ್ದಾರೆ. ಪೋಷಕರು ದೂರು ನೀಡಿದ ಬಳಿಕ ಬಿಇಓ ವಿಜಯಕುಮಾರ್ ಅವರು ಶಾಲೆಗೆ ಭೇಟಿ ನೀಡಿ ವಿಚಾರಣೆ ಮಾಡಿದ್ದಾರೆ. ಬಳಿಕ ಆರೋಪಿ ಶಿಕ್ಷಕನನ್ನು ಶಾಲೆಯಿಂದ ಅಮಾನತು ಮಾಡಿದ್ದಾರೆ.ಈ ಘಟನೆ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


