ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಹದಗಡೆಸಿದ ಆರೋಪದ ಮೇಲೆ ಸಿಆರ್‍ಪಿಸಿ 107 ಹಾಕಲಾಗಿತ್ತು. ಸೆಕ್ಷನ್ ಹಾಕಿ ವಾರ ಕಳೆದರು ದುನಿಯಾ ವಿಜಿ ಬಂದು ಮುಚ್ಚಳಿಕೆ ಬರೆದು ಕೊಡಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ನೀಡಿದ್ದಾರೆ.ದುನಿಯಾ ವಿಜಯ್ ಕುಟುಂಬದವರು ಪದೇ ಪದೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆ. ಸಮಾಜದ ಶಾಂತಿ ಕದಡುತ್ತಿದ್ದಾರೆ ಎಂದು ದುನಿಯಾ ವಿಜಯ್ ಹಾಗೂ ನಾಗರತ್ನ ಎರಡು ಕಡೆಯವರ ಮೇಲೆ 107 ಸೆಕ್ಷನ್ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.ಸದ್ಯ ದುನಿಯಾ ವಿಜಿ ಸ್ಥಳೀಯ ಡಿಸಿಪಿ ನೇತೃತ್ವದಲ್ಲಿ ವಿಚಾರಣೆ ನಡೆಯಲಿದ್ದಾರೆ. ಸೋಮವಾರ ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಮುಂದೆ ನಟ ದುನಿಯಾ ವಿಜಯ್ ಹಾಗೂ ಇತರರು ಹಾಜರಾಗಲಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


