ಬಳ್ಳಾರಿ: ಕೆಎಸ್‍ಆರ್ ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊಬ್ಬ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಮೃತಪಟ್ಟ ಘಟನೆ ದೇವಸಮುದ್ರ ಕ್ರಾಸ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.ನೆಲ್ಲೂಡಿ ಕೊಟ್ಟಾಲ್ನ ಸಣ್ಣ ಯರೆಪ್ಪ(45) ಮೃತಪಟ್ಟ ದುರ್ದೈವಿ. ಬಳ್ಳಾರಿಯಿಂದ ಕಂಪ್ಲಿ ಬರುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕನ ಎರಡು ಕಾಲುಗಳಿಗೆ ಬಲವಾದ ಪೆಟ್ಟುಬಿದ್ದಿದ್ದು, ಗಂಗಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳಾದ 9 ಜನ ಪ್ರಯಾಣಿಕರು ಕಂಪ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಸದ್ಯ ಘಟನಾ ಸ್ಥಳಕ್ಕೆ ಸಿಪಿಐ ಎನ್.ನಂಜಪ್ಪ, ಪಿಎಸ್‍ಐ ಕೆ.ಬಿ ವಾಸುಕುಮಾರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಡ್ಡ ಬಂದ ಕುದುರೆ ತಪ್ಪಿಸಲು ಹೋಗಿ ಲಾರಿಗೆ ಡಿಕ್ಕಿ ಹೊಡೆಯಲಾಗಿದೆ ಎಂದು ಬಸ್ ಚಾಲಕ ಜಿಲಾನ್ಸಾಬ್ ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ಕಂಪ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


