ಬೆಳಗಾವಿ: ವರದಕ್ಷಿಣೆಗಾಗಿ ಪತ್ನಿ, ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಹತ್ಯೆಗೈದಿದ್ದ ಆರೋಪಿ ಪತಿಗೆ ಗಲ್ಲು ಶಿಕ್ಷೆ ವಿಧಿಸಿ 6ನೇ ಅಪರ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.ಸವದತ್ತಿ ತಾಲೂಕಿನ ಅಚ್ಚಮನಟ್ಟಿ ಗ್ರಾಮದ ರವಿ ಪ್ರಜಾರ ಗಲ್ಲು ಶಿಕ್ಷೆಗೆ ಗುರಿಯಾದ ಆರೋಪಿ. ಪತ್ನಿ ಕಮಲವ್ವಾ, ಮಕ್ಕಳಾದ ಗೀತಾ (4) ಹಾಗೂ ಆಕಾಶ್ (2) ಕೊಲೆಯಾದ ದುರ್ದೈವಿಗಳು. ಕೃತ್ಯಕ್ಕೆ ಸಹಾಯ ನೀಡಿದ್ದ ರವಿ ತಾಯಿ ಹಾಗೂ ಸಹೋದರನಿಗೆ 7 ವರ್ಷ ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.ಏನಿದು ಪ್ರಕರಣ?:
ಮದುವೆ ವೇಳೆ ಬಾಕಿ ಉಳಿದಿದ್ದ 10 ಸಾವಿರ ರೂ. ವರದಕ್ಷಿಣೆ ತರುವಂತೆ ಪತ್ನಿ ಕಮಲವ್ವಾ ಅವರಿಗೆ ರವಿ ಒತ್ತಾಯಿಸುತ್ತಿದ್ದ. ಈ ಸಂಬಂಧ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಕೊಲೆಗೆ ಸಂಚು ರೂಪಿಸಿದ್ದ ರವಿ, ಜುಲೈ 8, 2012 ರಂದು ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಇಟ್ಟಿದ್ದ. ಗಂಭೀರ ಗಾಯಗೊಂಡಿದ್ದ ಪತ್ನಿ ಹಾಗೂ ಮಕ್ಕಳು ಮೃತಪಟ್ಟಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


