ಬೆಂಗಳೂರು: ಫುಟ್‍ಪಾತ್ ನಲ್ಲಿನ ಮರಕ್ಕೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.ಬೆಂಗಳೂರಿನ ಚಾಮರಾಜಪೇಟೆ 4ನೇ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತ ಯುವಕ ಗುರುವಾರ ರಾತ್ರಿಯೇ ಫುಟ್ ಪಾತ್ ಗೆ ಬಂದು ಅಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ವಿ.ವಿ. ಪುರಂ ಪೊಲೀಸರು ಬಂದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಆದರೆ ಇದುವರೆಗೂ ಮೃತ ಯುವಕನ ಗುರುತು ಪತ್ತೆಯಾಗಿಲ್ಲ.ಮೇಲ್ನೋಟಕ್ಕೆ ಮೃತ ವ್ಯಕ್ತಿ ಈಶಾನ್ಯ ರಾಜ್ಯದ ಮೂಲದವನಾಗಿದ್ದು, ಸೆಕ್ಯೂರಿಟಿ ಗಾರ್ಡ್ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


