ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಸ್ವಾಮಿಯ ದೇವಾಲಯದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಈ ಬಾರಿ ಬರೊಬ್ಬರಿ 1.32 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.ಅಕ್ಟೋಬರ್ ತಿಂಗಳ ಕೊನೆಯ ದಿನವಾದ ಬುಧವಾರ ಎಣಿಕೆ ಕಾರ್ಯವನ್ನು ಆರಂಭಿಸಲಾಗಿತ್ತು. ಈ ವೇಳೆ ಒಟ್ಟು 1,32,83,620 ರೂ. ಸಂಗ್ರಹವಾಗಿದೆ. ಅಲ್ಲದೇ 45 ಗ್ರಾಂ ಚಿನ್ನ ಹಾಗೂ 1 ಕೆಜಿ 5 ಗ್ರಾಂ ಬೆಳ್ಳಿಯ ಆಭರಣಗಳು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಭ್ಯವಾಗಿದೆ.ಹುಂಡಿ ಎಣಿಕೆ ಕಾರ್ಯವನ್ನು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜಿ.ರೂಪಾ ಹಾಗೂ ಸಾಲೂರು ಮಠದ ಗುರುಸ್ವಾಮಿ ಸಮ್ಮುಖದಲ್ಲಿ ನೆರವೇರಿತ್ತು. ಎಸ್‍ಬಿಐ ಶಾಖೆಯ ಬ್ಯಾಂಕ್ ಸಿಬ್ಬಂದಿ ಹಾಗೂ ಸಿಸಿಟಿವಿಯ ಕಣ್ಗಾವಲಿನಲ್ಲಿ ಬುಧವಾರ ತಡರಾತ್ರಿಯವರೆಗೂ ಎಣಿಕೆ ಕಾರ್ಯ ನಡೆದಿತ್ತು.ಮಲೆ ಮಹದೇಶ್ವರ ದೇವಾಲಯವು ರಾಜ್ಯದಲ್ಲಿಯೇ ಮುಜರಾಯಿ ಇಲಾಖೆಗೆ ಅತಿ ಹೆಚ್ಚು ಆದಾಯ ತರುವ ದೇವಸ್ಥಾನಗಳ ಪೈಕಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಪ್ರತಿ ತಿಂಗಳ ಕೊನೆಯ ದಿನದಂದು ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ಇದನ್ನೂ ಓದಿ: ಚಾಮುಂಡಿ ದೇವಸ್ಥಾನದಲ್ಲಿ ಕೋಟಿ ದಾಟಿದ ಹುಂಡಿ ಹಣಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


