ಹುಬ್ಬಳ್ಳಿ: ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಕೆ ಮಾಡುತ್ತಿದ್ದ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ನಗರ ಪೊಲೀಸರು ಬಂಧಿಸಿದ್ದಾರೆಹಳೇ ಹುಬ್ಬಳ್ಳಿ ನಿವಾಸಿಗಳಾದ ಮಹಮ್ಮದ್ ರಫೀಕ್, ಗುಲ್ಜಾರ್ ಬೇಗಂ, ಕಮರಿಪೇಟೆಯ ರಾಜು ಹರಿಣಶಿಖಾರಿ ಹಾಗೂ ಲಕ್ಷ್ಮಣ ಹನುಮಸಾಗರ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಸುಮಾರು ಒಂದು ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬಂಧಿಸಿದ್ದು ಹೇಗೆ?
ಹುಬ್ಬಳ್ಳಿ ಪೊಲೀಸ್ ಆಯುಕ್ತ ಎಂ.ಎನ್.ನಾಗರಾಜ್, ಡಿಸಿಪಿ ಬಿ.ಎಸ್.ನೇಮಗೌಡ ಅವರ ನೇತೃತ್ವದಲ್ಲಿ ಪ್ರತಿ ತಿಂಗಳು ಒಂದು ವಾರ ‘ಗಾಂಜಾ ರೌಂಡ್ಸ್’ ಕಾರ್ಯಾಚರಣೆ ನಡೆಯುತ್ತಿದೆ. ಹೀಗಾಗಿ ಈ ವಾರ ಗಾಂಜಾ ಪೂರೈಕೆ ಮಾಡುವವರಿಗೆ ಪೊಲೀಸರು ಬಲೆ ಬೀಸಿದ್ದರು. ವಿವಿಧ ಮೂಲಗಳಿಂದ ಮಾಹಿತಿ ಪಡೆದಿದ್ದ ಪೊಲೀಸರು, ನಾಲ್ವರ ಮೇಲೆ ದಾಳಿ ಮಾಡಿ ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಹಳೇ ಹುಬ್ಬಳ್ಳಿ ಹಾಗೂ ಕಮರಿಪೇಟೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿವೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


