ಹಾವೇರಿ: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಮಾಡೋದನ್ನ ಬಿಟ್ಟು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಉಪಚುನಾವಣೆಯ ಪ್ರಚಾರ ಮಾಡಿದ್ದಾರೆ.63ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಧ್ವಜಾರೋಹಣ ಮಾಡಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಆಚರಣೆಯಲ್ಲಿ ಭಾಗಿಯಾಗದೇ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದಾರೆ.ಸಚಿವರ ಗೈರಿನಿಂದ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಮತ್ತು ಇತರ ಅಧಿಕಾರಿಗಳು ಸೇರಿ ಧ್ವಜಾರೋಹಣ ಮಾಡಿದರು. ಈ ಸಂಭ್ರಮದಲ್ಲಿ ಸ್ಥಳಿಯ ಶಾಸಕ ನೆಹೆರು ಓಲೇಕಾರ್ ಕೂಡ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರಿಂದ ಆಕರ್ಷಕ ಪಥಸಂಚಲನ ನಡೆಯಿತು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


