ತುಮಕೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಪುತ್ರನಿಗೆ ಜನ್ಮದಿನದ ಶುಭ ಕೋರಿ ಮನೆಗೆ ಹಿಂತಿರುಗುತ್ತಿದ್ದ ಅಭಿಮಾನಿಯೊಬ್ಬ ತುಮಕೂರು-ಕೊರಟಗೆರೆ ಮುಖ್ಯರಸ್ತೆಯ ಮುಗ್ಗೊಂಡನಹಳ್ಳಿ ಬಳಿ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾನೆ.ಮಧುಗಿರಿಯ ಬೆಂಕಿಪುರದ ನಿವಾಸಿ ರಾಕೇಶ್(21) ಮೃತ ಯುವಕ. ಬೆಂಗಳೂರಿನಿಂದ ಮರುಳುತ್ತಿದ್ದಾಗ ಅವಘಡ ಸಂಭವಿಸಿದ್ದು ಬೈಕ್ ಸವಾರ ಕಾರ್ತಿಕ್ ಗೆ ಗಂಭೀರ ಗಾಯವಾಗಿದೆ. ಆತನನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಆಗಿದ್ದೇನು?:
ರಾಕೇಶ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಟ್ಟಾ ಅಭಿಯಾನಿಯಾಗಿದ್ದ. ಹೀಗಾಗಿ ತನ್ನ ಸ್ನೇಹಿತ ಕಾರ್ತಿಕ್ ಜೊತೆಗೆ ಬೈಕ್‍ನಲ್ಲಿ ದರ್ಶನ್ ಪುತ್ರ ವಿನೀಶ್‍ಗೆ ಜನ್ಮದಿನದ ಶುಭಕೋರಲು ಬುಧವಾರ ಬೆಳಗ್ಗೆ ಬೆಂಗಳೂರಿಗೆ ಬಂದಿದ್ದ. ವಿನೀಶ್ ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿ ಶುಭ ಕೋರಿದ್ದ ರಾಕೇಶ್ ಮತ್ತು ಕಾರ್ತಿಕ್ ಬೈಕ್‍ನಲ್ಲಿ ಗ್ರಾಮಕ್ಕೆ ಮರಳುತ್ತಿದ್ದರು. ಕಾರ್ತಿಕ್ ಬೈಕ್ ಚಲಾಯಿಸುತ್ತಿದ್ದರೆ ರಾಕೇಶ್ ಹಿಂಬದಿಯಲ್ಲಿ ಕುಳಿತಿದ್ದ.ತುಮಕೂರು-ಕೊರಟಗೆರೆ ಮುಖ್ಯರಸ್ತೆಯ ಮುಗ್ಗೊಂಡನಹಳ್ಳಿ ಬಳಿ ಬೈಕ್ ಬರುತ್ತಿದ್ದಂತೆ, ಕಾರ್ತಿಕ್ ತಳ್ಳೋಗಾಡಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿಯಲ್ಲಿ ಕುಳಿತ್ತಿದ್ದ ರಾಕೇಶ್ ಬೈಕ್‍ನಿಂದ ಎಗರಿ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸವಾರ ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದು ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ಮುಂದುವರಿದಿದೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


