ಬೆಂಗಳೂರು: ಅಪ್ರಾಪ್ತ ಬಾಲಕಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ವಿದ್ಯಾರ್ಥಿಯೊಬ್ಬನನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ಪೂರ್ವ ತಾಲೂಕಿನ ಬೊಮ್ಮನಹಳ್ಳಿಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಐಟಿಐ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಲೈಂಗಿಕ ಕಿರುಕುಳ ನೀಡಿದ್ದಾನೆ.ವಿದ್ಯಾರ್ಥಿನಿ ಶೌಚಾಲಯದಲ್ಲಿ ಕಿರುಚಾಡಿದ್ದನ್ನು ಗಮನಿಸಿದವರು ವಿದ್ಯಾರ್ಥಿಯನ್ನು ಹಿಡಿದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಆವಲಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಂಧಿತ ಆರೋಪಿ ಹೊಸಕೋಟೆ ತಾಲೂಕಿನ ಕುರುಬರಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಸದ್ಯ ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


