ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ಜರುಗಿದೆ.ಗೂಳಿಪುರದ ಮಹೇಶ್ (25) ಆತ್ಮಹತ್ಯೆಗೆ ಶರಣಾದ ಯುವಕ. ಇಂದು ಬೆಳಗ್ಗೆ ಮನೆಯ ಹಿಂದೆ ಇರುವ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಹೇಶ್ ಒಂದು ವರ್ಷದ ಹಿಂದೆ ಅಪಘಾತ ಮಾಡಿದ್ದನು. ಈ ಸಂಬಂಧ ಕೋರ್ಟ್ ನಲ್ಲಿ ಕೇಸ್ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.ಮೂರು ದಿನಗಳ ಹಿಂದೆ ಅಪಘಾತಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ನೀಡಿತ್ತು. ಅಂದಿನಿಂದಲೂ ಮಹೇಶ್ ಮಂಕಾಗಿದ್ದು, ಕೊನೆಗೆ ಜೀವನದಲ್ಲಿ ಜಿಗುಪ್ಸೆಗೊಂಡು ನೇಣಿಗೆ ಶರಣಾಗಿದ್ದಾನೆ ಎಂದು ಪೋಷಕರು ಮತ್ತು ಸ್ನೇಹಿತರು ಹೇಳಿದ್ದಾರೆ.ಈ ಕುರಿತು ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


