ಬೆಂಗಳೂರು: ಹಾಡಹಗಲೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಮೈ ಮುಟ್ಟಲು ಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಮಿಳುನಾಡು ಮೂಲದ ಆರ್ಮುಗಂ(38) ಬಂಧಿತ ಆರೋಪಿ. ಅಶೋಕ ನಗರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಘಟನೆ ಅಕ್ಟೋಬರ್ 26ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಅಶೋಕ್‍ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ವಿಲ್ಸನ್‍ಗಾರ್ಡನ್ ನಿವಾಸಿ 20 ವರ್ಷದ ಯುವತಿ ಬ್ರಿಗೇಡ್ ರಸ್ತೆಯಲ್ಲಿರುವ ಶೋರೂಂವೊಂದರಲ್ಲಿ ಸ್ವಾಗತಕಾರಿಣಿಯಾಗಿ ಆಗಿ ಕೆಲಸ ಮಾಡುತ್ತಿದ್ದರು. ಅಕ್ಟೋಬರ್ 26ರಂದು ಯುವತಿ ಊಟ ಮಾಡಲು ಮೆಗ್ರತ್ ರಸ್ತೆ ಮಾರ್ಗವಾಗಿ ಹೋಟೆಲಿಗೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆರೋಪಿ ಆರ್ಮುಗಂ ಎದುರಿಗೆ ಬಂದಿದ್ದಾನೆ. ಈ ವೇಳೆ ಆರೋಪಿ ಆರ್ಮುಗಂ ಯುವತಿಯ ಬಳಿ ಹೋಗಿ ಆಕೆಯ ಮೈ ಮುಟ್ಟಲು ಯತ್ನಿಸಿ ಅಶ್ಲೀಲವಾಗಿ ವರ್ತಿಸಿದ್ದಾನೆ. ಇದರಿಂದ ಭಯಗೊಂಡ ಯುವತಿ ಕಾಮುಕನಿಂದ ಬಿಡಿಸಿಕೊಂಡು ಅದೇ ರಸ್ತೆಯಲ್ಲಿದ್ದ ಸಂಚಾರಿ ಪೊಲೀಸರ ಗಮನಕ್ಕೆ ತಂದಿದ್ದಾರೆ.ಯುವತಿ ಪೊಲೀಸರ ಬಳಿ ಹೋಗುವುದನ್ನು ಆರೋಪಿ ಆರ್ಮುಗಂ ನೋಡಿದ್ದು, ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಕೂಡಲೇ ಸಂಚಾರಿ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದ್ದಾರೆ. ಬಳಿಕ ಅಶೋಕ ನಗರ ಅಪರಾಧ ವಿಭಾಗದ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯಕ್ಕೆ ಈ ಘಟನೆ ಕುರಿತಂತೆ ಯುವತಿ ಅಶೋಕ್‍ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವತಿಯ ದೂರಿನ ಆಧಾರದ ಮೇರೆಗೆ ಪೊಲೀಸರು ಆರೋಪಿ ಆರ್ಮುಗಂನನ್ನು ಬಂಧಿಸಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


