ಬೆಂಗಳೂರು: ಮೆಟ್ರೋ ಕಾಮಗಾರಿ ವೇಳೆ ಡ್ರಿಲ್ಲಿಂಗ್ ಮಾಡುವಾಗ ಗ್ಯಾಸ್ ಪೈಪ್ ಲೀಕೇಜ್ ಆಗಿ ಕೆಲ ಗಂಟೆಗಳ ಕಾಲ ರಸ್ತೆಯಲ್ಲಿ ಸಂಚಾರಿಸುವ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ಬೆಂಗಳೂರಿನ ಮಹದೇವಪುರ ಬಳಿಯ ಗರುಡಾಚಾರ್ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ನಡೆಯುತ್ತಿದ್ದ ಮೆಟ್ರೋ ಕಾಮಗಾರಿ ವೇಳೆ ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಡ್ರಿಲ್ಲಿಂಗ್ ಮಾಡುವಾಗ ಅಲ್ಲಿದ್ದಂತಹ 70 ಕಿ.ಲೋ ಫೋರ್ಸ್ ನ ಗ್ಯಾಸ್ ಪೈಪ್ ಲೈನ್ ಲೀಕೇಜ್ ಆಗಿದೆ.ಗ್ಯಾಸ್ ಲೀಕೇಜ್ ಬಳಿಕ ಕೆಲ ಗಂಟೆಗಳ ಕಾಲ ಅಲ್ಲಿನ ಸಾರ್ವಜನಿಕರಲ್ಲಿ ಆತಂಕ ವಾತಾವರಣ ನಿರ್ಮಾಣವಾಗಿತ್ತು. ಐಟಿಪಿಎಲ್ ಪ್ರಮುಖ ರಸ್ತೆಯು ಕೆಲ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಅವಘಡದ ಆತಂಕದಲ್ಲಿ ಅಲ್ಲಿನ ಸುತ್ತಮುತ್ತಲಿನ ಕಡೆ ಮೊಬೈಲ್ ಫೋನ್ ಸಹ ನಿಷೇಧಿಸಲಾಗಿತ್ತು.ಸಮಸ್ಯೆ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಗ್ಯಾಸ್ ಲೀಕೇಜ್ ನಿಲ್ಲಿಸಲು ಹರಸಾಹಸ ಪಡಬೇಕಾಯಿತು. ನಂತರ ಕೆಲ ಗಂಟೆಗಳ ಬಳಿಕ ಗ್ಯಾಸ್ ಪೈಪ್ ಲೀಕೇಜ್  ನ್ನು ನಿಲ್ಲಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


