ಶಿವಮೊಗ್ಗ: ಕಾಂಗ್ರೆಸ್ ಮುಖಂಡನೋರ್ವ ಕರ್ತವ್ಯ ನಿರತ ಪೊಲೀಸರನ್ನು ಅವಾಚ್ಯ ಪದಗಳಿಂದ ನಿಂದಿಸಿರುವ ಘಟನೆ ಶಿವಮೊಗ್ಗದ ಹೊಳಲೂರಿನಲ್ಲಿ ನಡೆದಿದೆ.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತವೀರನಾಯ್ಕ ಪೊಲೀಸರನ್ನು ನಿಂದಿಸಿದ ಕಾಂಗ್ರೆಸ್ ಮುಖಂಡ. ಇಂದು ಹೊಳಲೂರಿನಲ್ಲಿ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ್ದರು. ಈ ವೇಳೆ ಶಾಂತವೀರನಾಯ್ಕ ಸಿಎಂರನ್ನು ಭೇಟಿಯಾಗಲು ಪ್ರಯತ್ನಿಸಿದಾಗ ಪೊಲೀಸರು ಅಡ್ಡಗಟ್ಟಿದ್ದರು. ಇದರಿಂದ ಕೋಪಗೊಂಡ ಕಾಂಗ್ರೆಸ್ ಮುಖಂಡ ಕರ್ತವ್ಯ ಪೊಲೀಸರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ.ಪೊಲೀಸರು ಕೂಡಲೇ ಕಾಂಗ್ರೆಸ್ ಮುಖಂಡನನ್ನು ವಶಕ್ಕೆ ಪಡೆದುಕೊಂಡು ಜೀಪಿನಲ್ಲಿ ಕೆರೆದುಕೊಂಡು ಹೋಗಿದ್ದಾರೆ. ಶಿವಮೊಗ್ಗದ ಬಹಿರಂಗ ಸಭೆಯಲ್ಲಿ ಸಿಎಂ ಭಾಗಿಯಾಗಿದ್ದರೂ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆ ರತ್ನಾಕರ, ಮಂಜುನಾಥ ಭಂಡಾರಿ ಸೇರಿದಂತೆ ಮತ್ತಿತರು ಗೈರಾಗಿದ್ದರು. ಶಿವಮೊಗ್ಗ ಉಪಚುನಾವಣೆಯ ಅಭ್ಯರ್ಥಿ ಮಧು ಬಂಗಾರಪ್ಪ, ಕಾಂಗ್ರೆಸ್ ಶಾಸಕ ಪ್ರಸನ್ನ ಕುಮಾರ್, ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಫಾರೂಕ್ ಭಾಗಿಯಾಗುವ ಮೂಲಕ ಸಿಎಂಗೆ ಸಾಥ್ ನೀಡಿದ್ದರು.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvSign in to your account
Username or Email Address


Password

 Remember Me


